ADVERTISEMENT

ದೇಶ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಗೆ ಮತಕಳ್ಳತನ ಕಾರಣ: ರಾಹುಲ್‌ ಗಾಂಧಿ

ಪಿಟಿಐ
Published 23 ಸೆಪ್ಟೆಂಬರ್ 2025, 7:39 IST
Last Updated 23 ಸೆಪ್ಟೆಂಬರ್ 2025, 7:39 IST
<div class="paragraphs"><p>ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ</p></div>

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ

   

ಕೃಪೆ: ಪಿಟಿಐ

ನವದೆಹಲಿ: ದೇಶ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ನಿರುದ್ಯೋಗವಾಗಿದ್ದು, ಇದಕ್ಕೆ ಮತಕಳ್ಳತನ ನೇರವಾಗಿ ಕಾರಣವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಚುನಾವಣೆಗಳಲ್ಲಿ ಮತಕಳ್ಳತನ ಮುಂದುವರಿದ್ದರಿಂದ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ. ನಿರುದ್ಯೋಗ ಮತ್ತು ಮತ ಕಳ್ಳತನವನ್ನು ಯುವಜನತೆ ಇನ್ನು ಮುಂದೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಒಂದು ಸರ್ಕಾರ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬಂದಾಗ, ಮೊದಲ ಕರ್ತವ್ಯ ಯುವಕರಿಗೆ ಉದ್ಯೋಗ ಅವಕಾಶವನ್ನು ಸೃಷ್ಟಿಸುವುದಾಗಿದೆ. ಆದರೆ ಬಿಜೆಪಿ ಪ್ರಾಮಾಣಿಕವಾಗಿ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಮತಗಳನ್ನು ಕದಿಯುವ ಮೂಲಕ ಹಾಗೂ ಸಂಸ್ಥೆಗಳನ್ನು ನಿಯಂತ್ರಿಸುವ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ರಾಹುಲ್‌ ಆರೋಪಿಸಿದ್ದಾರೆ.

ಯುವಕರು ತಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಿದ್ದು, ಕನಸು ಕಾಣುತ್ತಿದ್ದಾರೆ. ಆದರೆ, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು, ಸೆಲೆಬ್ರಿಟಿಗಳು ತಮ್ಮನ್ನು ಹೊಗಳುವಂತೆ ಮಾಡುವ ಕೆಲಸಗಳ ಮೇಲೆ ಗಮನಹರಿಸುತಿದ್ದಾರೆ. ಹಾಗೆಯೇ ದೇಶದ ಶ್ರೀಮಂತರಿಗೆ ಲಾಭ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದಾರೆ. ಈ ಮೂಲಕ ಯುವಕರ ಭರವಸೆಗಳನ್ನು ಛಿದ್ರಗೊಳಿಸಿದ್ದು, ನಿರಾಶೆಯ ಭಾವನೆ ಮೂಡಿಸಿದ್ದಾರೆ ಎಂದು ರಾಹುಲ್‌ ಟೀಕಿಸಿದ್ದಾರೆ. ಎಂದು ರಾಹುಲ್‌ ಟೀಕಿಸಿದ್ದಾರೆ.

ಪರದೆಯ ಮುಂದೆ ಸಸಿಗಳನ್ನು ನೆಡುವ ಮೋದಿ, ಹಿಂಭಾಗದಲ್ಲಿ ತಮ್ಮ ಉದ್ಯೋಗಕ್ಕಾಗಿ ಧ್ವನಿಗೂಡಿಸುವ ಯುವ ಜನತೆಯ ಮೇಲೆ ಲಾಠಿ ಚಾರ್ಚ್‌ ನಡೆಸುತ್ತಾರೆ ಎಂದು ರಾಹುಲ್‌ ಆಕ್ರೋಶ ವ್ಯಕ್ತ‍ಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.