ADVERTISEMENT

ಕೃಷಿ ಮಸೂದೆ ವಿರೋಧಿಸಿ ‘ರೈತರಿಗಾಗಿ ಮಾತನಾಡಿ’ ಅಭಿಯಾನ ಆರಂಭಿಸಿದ ಕಾಂಗ್ರೆಸ್‌

ಪಿಟಿಐ
Published 26 ಸೆಪ್ಟೆಂಬರ್ 2020, 6:47 IST
Last Updated 26 ಸೆಪ್ಟೆಂಬರ್ 2020, 6:47 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸಿ ‘ರೈತರಿಗಾಗಿ ಮಾತನಾಡಿ’ ಎಂಬ ಅಭಿಯಾನವನ್ನು ಕಾಂಗ್ರೆಸ್‌ ಪಕ್ಷ ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಆರಂಭಿಸಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರನ್ನು ಶೋಷಿಸುತ್ತಿದ್ದು, ಅದರ ವಿರುದ್ಧ ಜನರು ಧ್ವನಿಯೆತ್ತಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕರೆ ನೀಡಿದ್ದಾರೆ.

‘ಮೋದಿ ಸರ್ಕಾರದಲ್ಲಿ ರೈತರ ಮೇಲೆ ಆಗುತ್ತಿರುವ ದೌರ್ಜನ್ಯ ಮತ್ತು ಶೋಷಣೆಯ ವಿರುದ್ಧ ಒಂದಾಗಿ ಧ್ವನಿಯೆತ್ತಬೇಕಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ವಿಡಿಯೊ ಕಳುಹಿಸುವ ಮೂಲಕ ‘ರೈತರಿಗಾಗಿ ಮಾತನಾಡಿ’ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದಿರುವ ಅವರು, ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಆಗ್ರಹಿಸಿರುವ ವಿಡಿಯೊವನ್ನು ಟ್ಯಾಗ್‌ ಮಾಡಿದ್ದಾರೆ.

ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳು ಸಂಸತ್ತಿನ ಉಭಯ ಸದನಗಳಲ್ಲಿ ಇತ್ತೀಚೆಗೆ ಅಂಗೀಕಾರ ಪಡೆದಿದ್ದು, ರಾಷ್ಟ್ರಪತಿ ಅವರ ಅಂಕಿತವಷ್ಟೇ ಬಾಕಿಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.