ADVERTISEMENT

ಕೇರಳದ ವಯನಾಡ್ ಕ್ಷೇತ್ರದಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಸಂಸದ ಕೆ. ಮುರಳೀಧರನ್

ಪಿಟಿಐ
Published 27 ಜನವರಿ 2024, 2:56 IST
Last Updated 27 ಜನವರಿ 2024, 2:56 IST
<div class="paragraphs"><p>ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ</p></div>

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ

   

(ಚಿತ್ರ ಕೃಪೆ–ಪಿಟಿಐ)

ಕೋಯಿಕ್ಕೋಡ್ (ಕೇರಳ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ. ಮುರಳೀಧರನ್ ಶುಕ್ರವಾರ ಹೇಳಿದ್ದಾರೆ.

ADVERTISEMENT

‘ಈಗಿನ ವ್ಯವಸ್ಥೆಯನ್ನು ನಾನು ನಂಬುತ್ತೇನೆ. ರಾಹುಲ್ ಗಾಂಧಿ ವಯನಾಡ್ ನಿಂದ ಸ್ಪರ್ಧಿಸಲಿದ್ದಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಣ್ಣೂರು ಹೊರತುಪಡಿಸಿ ಕೇರಳದ ಎಲ್ಲಾ ಹಾಲಿ ಸಂಸದರು ಅವೇ ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದೂ ಅವರು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಯನಾಡ್ ಕ್ಷೇತ್ರದಿಂದಲೇ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.