ADVERTISEMENT

ಹೊಸ ವರ್ಷದ ಸಂದೇಶ; ಪ್ರೀತಿ-ಯಶಸ್ಸನ್ನು ಹಾರೈಸಿದ ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜನವರಿ 2023, 2:12 IST
Last Updated 1 ಜನವರಿ 2023, 2:12 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದು, ಪ್ರೀತಿ ಮತ್ತು ಯಶಸ್ಸನ್ನು ಹಾರೈಸಿದ್ದಾರೆ.

ಕಾಂಗ್ರೆಸ್ ಜೋಡೊ ಯಾತ್ರೆಯ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿರುವ ರಾಹುಲ್, ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

2023ರಲ್ಲಿ ಪ್ರತಿ ಬೀದಿ, ಪ್ರತಿ ಹಳ್ಳಿ, ಪ್ರತಿ ನಗರದಲ್ಲಿ ಪ್ರೀತಿಯನ್ನು ಹಂಚುವ ಅಂಗಡಿ ತೆರೆಯಲಿದೆ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

2022 ಸೆಪ್ಟೆಂಬರ್‌ನಲ್ಲಿ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ಈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ.

ಈ ಹಿಂದೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಭಾರತ್ ಜೋಡೊ ಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸುವ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.