ADVERTISEMENT

ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ರಾಹುಲ್‌ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 6:35 IST
Last Updated 19 ಜೂನ್ 2019, 6:35 IST
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)   

ನವದೆಹಲಿ:ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ದೊರೆಯಲಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ‘ಶುಭಾಶಯ ಕೋರಿದ್ದಕ್ಕೆ ಧನ್ಯವಾದಗಳು ಮೋದಿಜಿ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ADVERTISEMENT

‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ದೊರೆಯಲಿ. ಜವಾಬ್ದಾರಿ ಮತ್ತುಅಭಿವೃದ್ಧಿಯ ಕುರಿತಾದ ಅವರ ಬದ್ಧತೆ ಪಕ್ಷಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಆಗಮಿಸಿದ ರಾಹುಲ್ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಶುಭಾಶಯ ಕೋರಿದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಟ್ವಿಟರ್‌ನಲ್ಲಿ#IAmRahulGandhi,#HappyBirthdayRahulGandhi, #RahulJi #RahulGandhiJiಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.