ADVERTISEMENT

ಬಕ್ರೀದ್‌ ದಿನ ಜಾನುವಾರು ಹತ್ಯೆಗೆ ಕಡಿವಾಣ: ಡಿಜಿಪಿಗೆ ಮಹಾರಾಷ್ಟ್ರ ಸ್ಪೀಕರ್ ಪತ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜುಲೈ 2022, 7:17 IST
Last Updated 9 ಜುಲೈ 2022, 7:17 IST
ರಾಹುಲ್‌ ನಾರ್ವೇಕರ್
ರಾಹುಲ್‌ ನಾರ್ವೇಕರ್    

ಮುಂಬೈ: ಬಕ್ರೀದ್ ಹಬ್ಬದ ಸಮಯದಲ್ಲಿ ಜಾನುವಾರುಗಳನ್ನು ಬಲಿ ನೀಡಬಾರದು. ಗೋಹತ್ಯೆ ತಡೆಗೆ ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಮಹಾರಾಷ್ಟ್ರ ವಿಧಾನಸಭೆ ಸಭಾಪತಿ ರಾಹುಲ್‌ ನಾರ್ವೇಕರ್ ಸೂಚಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಜಾಗ್ರತೆ ವಹಿಸುವ ಕುರಿತು ಡಿಜಿಪಿ ಅವರಿಗೆ ರಾಹುಲ್‌ ನಾರ್ವೇಕರ್ ಪತ್ರ ಬರೆದಿರುವುದಾಗಿ ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ಹೊರ ರಾಜ್ಯಗಳಿಂದ ಅಕ್ರಮವಾಗಿ ಗೋವುಗಳು, ಗೋಮಾಂಸ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಡಬೇಕು. ಗೋಹತ್ಯೆ ತಡೆಗಟ್ಟುವಲ್ಲಿ ಸಕ್ರಿಯರಾಗಿರಬೇಕು ಎಂದು ರಾಹುಲ್‌ ನಾರ್ವೇಕರ್ ಸೂಚಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ವಿಧಾನಸಭೆಯಲ್ಲಿ ಜುಲೈ 4ರಂದು (ಸೋಮವಾರ) ವಿಶ್ವಾಸ ಮತ ಗೆದ್ದಿದ್ದಾರೆ. ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ವಿರುದ್ಧ ಬಂಡಾಯ ಎದ್ದ ಶಿಂಧೆ ಅವರು ಬಿಜೆಪಿ ಬೆಂಬಲದೊಂದಿಗೆ ಜೂನ್‌ 30ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.