ADVERTISEMENT

ಆಳಸಮುದ್ರ ಗಣಿಗಾರಿಕೆ: ಟೆಂಡರ್‌ ರದ್ದುಪಡಿಸುವಂತೆ ಆಗ್ರಹಿಸಿ ಮೋದಿಗೆ ರಾಹುಲ್ ಪತ್ರ

ಪಿಟಿಐ
Published 31 ಮಾರ್ಚ್ 2025, 7:48 IST
Last Updated 31 ಮಾರ್ಚ್ 2025, 7:48 IST
<div class="paragraphs"><p>ರಾಹುಲ್ ಗಾಂಧಿ, ನರೇಂದ್ರ ಮೋದಿ</p></div>

ರಾಹುಲ್ ಗಾಂಧಿ, ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ನವದೆಹಲಿ: ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

ಈ ಕುರಿತು ತಮ್ಮ ವಾಟ್ಸಾಪ್‌ ಚಾನೆಲ್‌ನಲ್ಲಿ ಮಾಹಿತಿ ನೀಡಿರುವ ಅವರು, ‘ಸ್ಥಳೀಯರೊಂದಿಗೆ ಸಮಾಲೋಚಿಸದೆ, ಪರಿಸರದ ಮೇಲಿನ ಪರಿಣಾಮಗಳ ಕುರಿತು ಅಧ್ಯಯನ ನಡೆಸದೆ ಆಳಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾನು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದ್ದಾರೆ.

ಪರಿಸರದ ಮೇಲಿನ ಪರಿಣಾಮವನ್ನು ನಿರ್ಣಯಿಸದೆ ಗಣಿಗಾರಿಕೆಗೆ ಟೆಂಡರ್‌ ಆಹ್ವಾನಿಸಿದ್ದರ ವಿರುದ್ಧ ಕರಾವಳಿ ಸಮುದಾಯಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ.

ಗಣಿಗಾರಿಕೆ ಪರಿಣಾಮಗಳ ಬಗ್ಗೆ ಯೋಚಿಸದೆ ಖಾಸಗಿ ಕಂಪನಿಗಳಿಗೆ ಗಣಿಗಾರಿಕೆ ಮಾಡಲು ಅನುಮತಿಸುವುದು ಕಡಲ ಜೀವಗಳಿಗೆ ಅಪಾಯನ್ನುಂಟು ಮಾಡುವ ಸಾಧ್ಯತೆಯಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಲಕ್ಷಾಂತರ ಮೀನುಗಾರರು ತಮ್ಮ ಜೀವನೋಪಾಯ ಮೇಲೆ ಇದರ ಪರಿಣಾಮದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.