ADVERTISEMENT

ಪಕ್ಷದ ಮಹತ್ವದ ಸಭೆ ಸ್ಕಿಪ್ ಮಾಡಿ ರಾಹುಲ್ ಗಾಂಧಿ ವಿದೇಶಕ್ಕೆ: ಟೀಕೆ

ಪಿಟಿಐ
Published 12 ಜುಲೈ 2022, 16:04 IST
Last Updated 12 ಜುಲೈ 2022, 16:04 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಇರುವಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ತೆರಳಿದ್ದಾರೆ.ಈ ಕುರಿತು ಬಿಜೆಪಿ ಸೇರಿದಂತೆ ಅನೇಕರು ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ.

ಅವರು ವೈಯಕ್ತಿಕವಾಗಿ ಯೂರೋಪ್ ಪ್ರವಾಸ ಕೈಗೊಂಡಿದ್ದು ಭಾನುವಾರ ಮರಳುವ ನಿರೀಕ್ಷೆ ಇದೆ ಎನ್ನಲಾಗಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಬೆಂಬಲಿತ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವ ಬಗ್ಗೆ ಹಾಗೂ ಕಾಂಗ್ರೆಸ್‌ನ ಮಹತ್ವಾಕಾಂಕ್ಷಿ ‘ಭಾರತ್ ಜೋಡೊ’ ಯಾತ್ರೆಯ ಕುರಿತು ಬರುವ ಗುರುವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ಆಯೋಜನೆಗೊಂಡಿದೆ.

ADVERTISEMENT

ಈ ಸಭೆಗೆ ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಕಮಿಟಿಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಹಿಂದೆಯೂ ಕೂಡ ಪಕ್ಷದ ಮಹತ್ವದ ಸಂದರ್ಭಗಳಲ್ಲಿ ರಾಹುಲ್ ಗಾಂಧಿ ಅವರು ವಿದೇಶಕ್ಕೆ ತೆರಳಿದ್ದು ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.