ಫಾಕ್ಸ್‌ಕಾನ್ ಮುಖ್ಯಸ್ಥ ಯಂಗ್ ಲಿಯು ಭೇಟಿಯಾದ ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತ ಪ್ರವಾಸದಲ್ಲಿರುವ ಫಾಕ್ಸ್‌ಕಾನ್ ಮುಖ್ಯಸ್ಥ ಯಂಗ್ ಲಿಯು ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
‘ಯಂಗ್ ಲಿಯು ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು. ಭಾರತ ಮತ್ತು ಜಗತ್ತಿನಲ್ಲಿ ಭವಿಷ್ಯದ ತಂತ್ರಜ್ಞಾನ ಬೆಳವಣಿಗೆ ಬಗ್ಗೆ ಚರ್ಚಿಸಿದೆವು’ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
‘ಸರಿಯಾದ ಪ್ರೋತ್ಸಾಹದಿಂದ ಭಾರತದ ತಂತ್ರಜ್ಞಾನ ಮಾರುಕಟ್ಟೆ ಮುಂದಿನ ದಿನಗಳಲ್ಲಿ ಪ್ರಮುಖ ಸ್ಥಾನದಲ್ಲಿರಲಿದೆ’ ಎಂದು ರಾಹುಲ್ ಹೇಳಿದ್ದಾರೆ.
ಲಿಯು ಅವರು ಈ ಬಾರಿಯ 75ನೇ ಗಣರಾಜ್ಯೋತ್ಸವದಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನಾರಗಿದ್ದಾರೆ.
ಆಪಲ್‌ನೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಫಾಕ್ಸ್‌ಕಾನ್, ಭಾರತದಲ್ಲಿ 40 ಸಾವಿರ ಜನರಿಗೆ ಉದ್ಯೋಗ ಸೃಷ್ಡಿಸಲು ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.