ADVERTISEMENT

ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆ : ರಾಹುಲ್‌ಗೆ ಮತ್ತಷ್ಟು ಭದ್ರತೆ

ಐಎಎನ್ಎಸ್
Published 9 ಜನವರಿ 2023, 13:06 IST
Last Updated 9 ಜನವರಿ 2023, 13:06 IST
   

ನವದೆಹಲಿ: ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ಈ ತಿಂಗಳು ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಲಿದ್ದು, ರಾಹುಲ್ ಗಾಂಧಿ ಅವರ ಭದ್ರತೆಯನ್ನು ಬಿಗಿಗೊಳಿಸಲು ಭದ್ರತಾ ಏಜೆನ್ಸಿಗಳು ಸಿದ್ಧತೆ ನಡೆಸಿವೆ.

ಎರಡೂ ಪ್ರದೇಶಗಳು ಸೂಕ್ಷ್ಮವಾಗಿರುವುದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದೆ ಎಂದು ಮೂಲಗಳು ಹೇಳಿವೆ.

ಕೇಂದ್ರದ ಭದ್ರತಾ ಏಜೆನ್ಸಿಗಳು ಸ್ಥಳೀಯ ಪೊಲೀಸರಿಂದ ಯಾತ್ರೆಯ ಮಾರ್ಗದ ಮಾಹಿತಿಯನ್ನು ಕೇಳಿವೆ. ಪಂಜಾಬ್ ಮತ್ತು ಜಮ್ಮು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳ ಬೆನ್ನಲ್ಲೇ ಮತ್ತಷ್ಟು ಎಚ್ಚರ ವಹಿಸಲಾಗುತ್ತಿದೆ.

ADVERTISEMENT

ರಾಹುಲ್‌ ಗಾಂಧಿಗೆ ಝಡ್ ಪ್ಲಸ್ ಮಟ್ಟದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಗುಪ್ತಚರ ಇಲಾಖೆ ಕೂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಡಿಸೆಂಬರ್‌ನಲ್ಲಿ ಈ ಸಂಬಂಧ ಗೃಹ ಇಲಾಖೆಗೆ ಪತ್ರ ಬರೆದಿದ್ದ ಕಾಂಗ್ರೆಸ್‌ ರಾಹುಲ್‌ ಗಾಂಧಿಯವರಿಗೆ ಯಾತ್ರೆ ವೇಳೆ ಸೂಕ್ತ ಭದ್ರತೆ ಒದಗಿಸುವಂತೆ ಕೇಳಿತ್ತು

ಯಾತ್ರೆಯು ಸೆಪ್ಟೆಂಬರ್ 7 ರಂದು ಪ್ರಾರಂಭವಾಗಿದ್ದು, ಜನವರಿ 30 ರಂದು ಕಾಶ್ಮೀರದಲ್ಲಿ ಕೊನೆಗೊಳ್ಳುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.