ADVERTISEMENT

ರಾಯಚೂರು ಐಐಐಟಿಗೆ ಪದವಿ ನೀಡುವ ಅಧಿಕಾರ: ಅನುಮೋದನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 17:56 IST
Last Updated 5 ಫೆಬ್ರುವರಿ 2020, 17:56 IST

ನವದೆಹಲಿ: ರಾಯಚೂರಿನ ಭಾರತೀಯ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ಇತರ ನಾಲ್ಕು ಐಐಐಟಿಗಳಿಗೆ ಪದವಿ ನೀಡುವ ಅಧಿಕಾರ ಮತ್ತು ರಾಷ್ಟ್ರೀಯ ಮಹತ್ವದ ಸಂಸ್ಥೆಯ ಸ್ಥಾನಮಾನ ನೀಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಅನುಮೋದನೆ ಲಭಿಸಿದೆ.

ಈ ಮಸೂದೆಯನ್ನು ಕೇಂದ್ರ ಸರ್ಕಾರವು ಶೀಘ್ರ ಸಂಸತ್‌ನಲ್ಲಿ ಮಂಡಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.