
ಔಷಧ
ನವದೆಹಲಿ: ಪಟ್ನಾದ ಬಳಿಯಿದ್ದ ನಕಲಿ ಔಷಧ ಕಾರ್ಖಾನೆ ಮೇಲೆ ದಾಳಿ ನಡೆಸಿರುವ ದೆಹಲಿ ಪೊಲೀಸರು, ಭಾರಿ ಪ್ರಮಾಣದ ಔಷಧವನ್ನು ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಯಾವುದೇ ಅಧಿಕೃತ ಉತ್ಪಾದನಾ ಪರವಾನಗಿ ಇಲ್ಲದೇ ಕಾರ್ಖಾನೆಯಲ್ಲಿ ನಕಲಿ ಔಷಧಗಳನ್ನು ತಯಾರಿಸಲಾಗುತಿತ್ತು. ರಸಾಯನಶಾಸ್ತ್ರಜ್ಞರು ಸೇರಿದಂತೆ ಕಡ್ಡಾಯ ತಾಂತ್ರಿಕ ಸಿಬ್ಬಂದಿಯ ಅನುಪಸ್ಥಿತಿಯಲ್ಲಿ ಔಷಧಗಳನ್ನು ತಯಾರು ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ನಕಲಿ ಔಷಧಗಳು, ಸಿರಪ್ ಹಾಗೂ ಸೈಕೋಟ್ರೋಪಿಕ್ ವಸ್ತುಗಳು ಪತ್ತೆಯಾಗಿವೆ. ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಾರ್ಖಾನೆಯೊಳಗೆ ಅವಧಿ ಮೀರಿದ ಔಷಧಗಳನ್ನು ಮತ್ತೆ ಪ್ಯಾಕ್ ಮಾಡಿ, ಕಡಿಮೆ ಬೆಲೆಗೆ ಮಾರುಕಟ್ಟೆಯಲ್ಲಿ ಮಾರುತ್ತಿದ್ದರು. ಇದು ಸಾರ್ವಜನಿಕರ ಆರೋಗ್ಯಕ್ಕೆ ದೊಡ್ಡ ಅಪಾಯ ತರುತ್ತಿತ್ತು ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಬಿಹಾರದಲ್ಲಿ ಎರಡು ಅಕ್ರಮ ಔಷಧ ಘಟಕಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ಪ್ರಕರಣದ ವಿಚಾರಣೆ ನಡೆಸುವಾಗ, ಮತ್ತಷ್ಟು ಮಾಹಿತಿಗಳು ಬಹಿರಂಗವಾಗಿದೆ. ಅದರ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಇದುವರೆಗೂ 9 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.