ADVERTISEMENT

ದೆಹಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ

ಪಿಟಿಐ
Published 16 ಫೆಬ್ರುವರಿ 2025, 4:18 IST
Last Updated 16 ಫೆಬ್ರುವರಿ 2025, 4:18 IST
<div class="paragraphs"><p>ನವದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ನೂಕು ನುಗ್ಗಲಿನ ದೃಶ್ಯ</p></div>

ನವದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ನೂಕು ನುಗ್ಗಲಿನ ದೃಶ್ಯ

   

ಪಿಟಿಐ ಚಿತ್ರ

ನವದೆಹಲಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ರೈಲ್ವೆ ಇಲಾಖೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.

ADVERTISEMENT

ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹2.5 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ ₹1 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ. 

ಕಾಲ್ತುಳಿತದಲ್ಲಿ 18  ಜನ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಕೆಲವು ರೈಲುಗಳು ವಿಳಂಬವಾದ ಕಾರಣ ಪ್ಲಾಟ್‌ಫಾರ್ಮ್‌ ಸಂಖ್ಯೆ 14ರ ಬಳಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.