ಬೆಂಗಳೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರವೂ ಉತ್ತರ ಭಾರತದಲ್ಲಿ 273 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
103 ಎಕ್ಸ್‌ಪ್ರೆಸ್ ರೈಲುಗಳು ಮತ್ತು 167 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಪಡಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ.
ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರೂ, ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಪ್ರದೇಶಗಳಲ್ಲಿ ರೈಲುಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಮುಂದಿನ ಎರಡು–ಮೂರು ದಿನಗಳಲ್ಲಿ ಎಲ್ಲ ರೈಲುಗಳ ಸಂಚಾರ ಯಥಾಸ್ಥಿತಿಗೆ ಬರಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಪೂರ್ವ ಕೇಂದ್ರ ರೈಲ್ವೆ ವಿಭಾಗದಲ್ಲಿ ಹೆಚ್ಚಿನ ರೈಲುಗಳ ಸಂಚಾರ ರದ್ದುಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.