ADVERTISEMENT

ಕುಡಿಯುವ ನೀರು: ರೈಲ್ವೆಯಿಂದ ತ್ವರಿತ ಕ್ರಮ

ಪ್ರಯಾಣಿಕರಿಗೆ ನೀರು ಪೂರೈಸಲು ಸ್ವಸಹಾಯ ಸಂಘದ ನೆರವಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 15:01 IST
Last Updated 15 ಏಪ್ರಿಲ್ 2024, 15:01 IST
.
.   

ನವದೆಹಲಿ: ಈ ವರ್ಷದ ಬೇಸಿಗೆ ಅವಧಿಯಲ್ಲಿ ಹೆಚ್ಚು ಬಿಸಿಲಿನ ಝಳ ಇರುವ ಕಾರಣ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರೈಲ್ವೆ ಇಲಾಖೆಯು ಎಲ್ಲಾ ವಲಯಗಳಿಗೆ ಸೂಚನೆ ನೀಡಿದೆ. 

ನಿಲ್ದಾಣಗಳಲ್ಲಿ ನೀರನ್ನು ತಂಪಾಗಿಡುವ ಯಂತ್ರಗಳು ಕಾರ್ಯ ನಿರ್ವಹಿಸುತ್ತಿವೆಯೇ, ಪ್ರಯಾಣಿಕರಿಗೆ ಕುಡಿಯುವ ನೀರು ಕಲ್ಪಿಸಲು ಎಲ್ಲಾ ನಿಲ್ದಾಣಗಳಲ್ಲಿ ನೀರಿನ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗಿದೆಯೇ, ನಿಲ್ದಾಣದ ಪ್ಲಾಟ್‌ಫಾರಂಗಳಲ್ಲಿ ನೀರು ಬರುತ್ತಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ರೈಲ್ವೆ ಇಲಾಖೆ ನಿರ್ದೇಶಿಸಿದೆ.  

ಅಲ್ಲದೆ, ರೈಲ್ವೆ ಪ್ಲಾಟ್‌ಫಾರಂನ ಜನರಲ್ ಬೋಗಿಗಳು ನಿಲ್ಲುವ ಕಡೆಗಳಲ್ಲಿ ಪ್ರಯಾಣಿಕರಿಗೆ ತಂಪಾದ ಕುಡಿಯುವ ನೀರು ಪೂರೈಸಲು ಸರ್ಕಾರೇತರ ಸಂಸ್ಥೆಗಳು (ಎನ್‌ಜಿಒಗಳು), ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ನೆರವನ್ನು ಪಡೆಯಬಹುದು ಎಂದು ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.