ADVERTISEMENT

ವಿದೇಶಿ ತಂತ್ರಜ್ಞಾನ ಅವಲಂಬನೆ ಕಡಿತಗೊಳಿಸಲು ಸಿ–ಡಾಟ್‌– ರೈಲ್ವೆ ಸಚಿವಾಲಯ ಒಪ್ಪಂದ

ಪಿಟಿಐ
Published 9 ಮೇ 2022, 14:33 IST
Last Updated 9 ಮೇ 2022, 14:33 IST

ನವದೆಹಲಿ (ಪಿಟಿಐ): ವಿದೇಶಿ ತಂತ್ರಜ್ಞಾನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೆಗೆ ಸ್ಥಳೀಯವಾಗಿ ಪರಿಹಾರ ಒದಗಿಸಲುಡಿಜಿಟಲ್ ತಂತ್ರಜ್ಞಾನ ಅಭಿವೃದ್ಧಿಪಡಿಸುವುದಕ್ಕೆ ರೈಲ್ವೆ ಸಚಿವಾಲಯ ಮತ್ತು ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (ಸಿ-ಡಾಟ್) ಒಡಂಬಡಿಕೆ ಮಾಡಿಕೊಂಡಿದ್ದು, ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ದೂರಸಂಪರ್ಕ ಇಲಾಖೆಯ ಸಂಶೋಧನಾ ಘಟಕದ ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಒಪ್ಪಂದದ ಅಡಿಯಲ್ಲಿ, ಸಿ–ಡಾಟ್‌ ಭಾರತೀಯ ರೈಲ್ವೆಯಲ್ಲಿ ಬಳಸಲಾಗುತ್ತಿರುವ ₹ 2,100 ಕೋಟಿ ಮೌಲ್ಯದ ವಿದೇಶಿ ತಂತ್ರಜ್ಞಾನದ ಗೇರ್‌ಗಳನ್ನು ಬದಲಿಸುವ ನಿರೀಕ್ಷೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸ್ವದೇಶಿ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಶ್ರಮ ವಹಿಸುವಂತೆ ಕೇಂದ್ರ ರೈಲ್ವೆ, ಸಂಪರ್ಕ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಒಪ್ಪಂದದಿಂದ ವಿದೇಶಿ ತಂತ್ರಜ್ಞಾನಗಳ ಮೇಲಿನ ರೈಲ್ವೆಯ ಅವಲಂಬನೆಯನ್ನು ಕಡಿಮೆ ಮಾಡುವುದಲ್ಲದೆ ಭದ್ರತಾ ಅಪಾಯಗಳನ್ನು ತಗ್ಗಿಸುತ್ತದೆ. ರೈಲ್ವೆಯ ನಿರ್ದಿಷ್ಟ ಅವಶ್ಯಕತೆಗಳಿಗೆ ಅನುಗುಣವಾಗಿ ಕೈಗೆಟುಕುವ ವೆಚ್ಚದಲ್ಲಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ’ ಎಂದು ಸಿ–ಡಾಟ್‌ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.