ADVERTISEMENT

ಜುಲೈ 1ರಿಂದ ರೈಲು ಪ್ರಯಾಣ ದರದಲ್ಲಿ ಅಲ್ಪ ಏರಿಕೆ: ವರದಿ

ಡೆಕ್ಕನ್ ಹೆರಾಲ್ಡ್
Published 24 ಜೂನ್ 2025, 11:28 IST
Last Updated 24 ಜೂನ್ 2025, 11:28 IST
   

ನವದೆಹಲಿ: ಭಾರತೀಯ ರೈಲ್ವೆಯು ಜುಲೈ 1 ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್ ಎಸಿ , ಎಕ್ಸ್‌ಪ್ರೆಸ್ ಮತ್ತು ದ್ವಿತೀಯ ದರ್ಜೆಯ ರೈಲ್ವೆ ಟಿಕೆಟ್‌ಗಳ ದರದಲ್ಲಿ ಅಲ್ಪ ಏರಿಕೆಯನ್ನು ಮಾಡಲು ಸಜ್ಜಾಗಿದೆ.

ಪ್ರಸ್ತಾವನೆಯ ಪ್ರಕಾರ, ಎಸಿ ಅಲ್ಲದ ಮತ್ತು ಎಕ್ಸ್‌ಪ್ರೆಸ್ ರೈಲುಗಳ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ ಮತ್ತು ಎಸಿ ದರ್ಜೆಯ ಟಿಕೆಟ್‌ಗಳ ದರದಲ್ಲಿ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ರೈಲ್ವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಬ್-ಅರ್ಬನ್ ರೈಲು ಪ್ರಯಾಣ ದರ ಮತ್ತು ಮಾಸಿಕ ಪಾಸ್ ದರದಲ್ಲಿ ಯಾವುದೇ ಹೆಚ್ಚಳವಿಲ್ಲ. ಎರಡನೇ ದರ್ಜೆಯ ಸಾಮಾನ್ಯ ಟಿಕೆಟ್‌ ದರದಲ್ಲಿ 500 ಕಿ.ಮೀ ವರೆಗೆ ಯಾವುದೇ ಹೆಚ್ಚಳ ಇರುವುದಿಲ್ಲ ಎಂದು ರೈಲ್ವೆ ಹೇಳಿದೆ. 500 ಕಿ.ಮೀ ನಂತರ, ಎರಡನೇ ದರ್ಜೆಯ ಸಾಮಾನ್ಯ ಟಿಕೆಟ್‌ ದರದಲ್ಲಿ ಪ್ರತಿ ಕಿ.ಮೀ.ಗೆ ಅರ್ಧ ಪೈಸೆ ಹೆಚ್ಚಳವಾಗಲಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಪ್ರಯಾಣಿಕರಿಗೆ, ವಿಶೇಷವಾಗಿ ಸಾಮಾನ್ಯ ಪ್ರಯಾಣಿಕರಿಗೆ ಮತ್ತು ಕಡಿಮೆ ದೂರ ಪ್ರಯಾಣಿಸುವವರಿಗೆ ಹೊರೆಯಾಗದಂತೆ ಕಾರ್ಯಾಚರಣೆಯ ವೆಚ್ಚವನ್ನು ನಿರ್ವಹಿಸಲು ಭಾರತೀಯ ರೈಲ್ವೆಯ ನಿರಂತರ ಪ್ರಯತ್ನಗಳ ಭಾಗವಾಗಿ ಈ ಪರಿಷ್ಕರಣೆ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.