ವಿಜಯಪುರ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹವನ್ನು 518 ಮೀಟರ್‌ಗೆ ಮಿತಿಗೊಳಿಸಬೇಕೆನ್ನುವ ಮಹಾರಾಷ್ಟ್ರ ಸರ್ಕಾರದ ಸಲಹೆಗೆ ಶಾಸಕ ಎಂ.ಬಿ.ಪಾಟೀಲ ಶನಿವಾರ ಇಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.
‘ನೀರು ಸಂಗ್ರಹಿಸುವ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮೊದಲಿನಿಂದಲೂ ಗೊಂದಲ ಸೃಷ್ಟಿಸುತ್ತಾ ಬಂದಿದೆ. ನೀರು ಬಿಡುವಾಗ ಒಂದು ಮಾತು, ಪ್ರವಾಹ ಸಂದರ್ಭದಲ್ಲಿ ಮತ್ತೊಂದು ಹೇಳಿಕೆ ನೀಡುವುದು ಮಹಾರಾಷ್ಟ್ರದ ಚಾಳಿಯಾಗಿದೆ. ನಾವು ಎಷ್ಟು ನೀರು ಸಂಗ್ರಹಿಸಬೇಕು ಎಂದು ಹೇಳಲು ಅವರು ಯಾರು? ಜಲಾಶಯದ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲಿದ್ದೇವೆ’ ಎಂದು ತಿರುಗೇಟು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.