ADVERTISEMENT

ಹೈದರಾಬಾದ್‌ನಲ್ಲಿ ಭಾರಿ ಮಳೆ: ಅಪಾರ್ಟ್‌ಮೆಂಟ್‌ ಗೋಡೆ ಕುಸಿದು 7 ಮಂದಿ ಸಾವು

ಪಿಟಿಐ
Published 8 ಮೇ 2024, 4:21 IST
Last Updated 8 ಮೇ 2024, 4:21 IST
<div class="paragraphs"><p>ಹೈದರಾಬಾದ್‌ನಲ್ಲಿ ಮಳೆ</p></div>

ಹೈದರಾಬಾದ್‌ನಲ್ಲಿ ಮಳೆ

   

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೃತರು ಒಡಿಶಾ ಮತ್ತು ಛತ್ತೀಸಗಢಕ್ಕೆ ಸೇರಿದ ಕಾರ್ಮಿಕರಾಗಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ADVERTISEMENT

ತೆಲಂಗಾಣ ನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆ ಸುರಿದಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿರುವುದರಿಂದ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿತ್ತು. ಪೊಲೀಸರು ಸೇರಿದಂತೆ ಡಿಆರ್‌ಎಫ್ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.