ADVERTISEMENT

ಕೇರಳ: ಸಾಧಾರಣ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2023, 13:46 IST
Last Updated 30 ಆಗಸ್ಟ್ 2023, 13:46 IST
ಮಳೆ ಚಿತ್ರ
ಮಳೆ ಚಿತ್ರ   

ತಿರುವನಂತಪುರ (ಪಿಟಿಐ): ಒಂದು ತಿಂಗಳ ಕಾಲ ಒಣ ಹವೆ ಮುಂದುವರಿಕೆಯ ಬಳಿಕ ಕೇರಳದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಬುಧವಾರ ಮುನ್ಸೂಚನೆ ನೀಡಿದೆ.

ತಿರುವನಂತಪುರ, ಕೊಲ್ಲಂ, ಅಲಪ್ಪುಳ ಹಾಗೂ ಎರ್ಲಾಕುಲಂ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೋಟಯಂ, ಪತ್ತನಂತಿಟ್ಟ, ಇಡುಕ್ಕಿ ಹಾಗೂ ತ್ರಿಶ್ಶೂರ್ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ಮುಂಗಾರು ಆರಂಭದ ಜೂನ್‌ 1ರಿಂದ ಆಗಸ್ಟ್‌ 29ರ ವರೆಗೆ ಶೇ 48ರಷ್ಟು ಮಳೆ ಕೊರತೆಯಾಗಿದೆ. ಇದು ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಅಲ್ಲದೇ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗಿದ್ದು, ವಿದ್ಯುತ್‌ ಉತ್ಪಾದನೆಗೆ ತೊಂದರೆಯಾಗಿದೆ. ಹಲವು ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸುವ ಕೊಳವೆಬಾವಿಗಳಲ್ಲಿ ಅಂತರ್ಜಲಮಟ್ಟ ಕಡಿಮೆಯಾಗಿದೆ. ಇದರಿಂದ ಜನರು ತೊಂದರೆಗೆ ಸಿಲುಕುವಂತಾಗಿದೆ ಎಂದು ವಿವರಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.