ಜೈಪುರ:ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಆರ್‌ಇಇಟಿ) ಅಧ್ಯಕ್ಷ ಅಜ್ಮೆರ್ ಡಿ.ಪಿ.ಜರೋಲಿ ಅವರನ್ನು ರಾಜ್ಯ ಸರ್ಕಾರ ವಜಾ ಮಾಡಿದೆ.
ಅಲ್ಲದೆ, ಮಂಡಳಿಯ ಕಾರ್ಯದರ್ಶಿ ಅರವಿಂದ್ ಕುಮಾರ್ ಸೆಂಗ್ವಾ ಅವರನ್ನು ಅಮಾನತುಗೊಳಿಸಿ ಸಿಬ್ಬಂದಿ ಇಲಾಖೆಯು ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಅಶೋಕ್ ಗೆಹಲೋತ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಇದಾದ ನಂತರ ರಾಜ್ಯವ್ಯಾಪಿ ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದುವಿರೋಧಪಕ್ಷ ಪಟ್ಟುಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.