ADVERTISEMENT

ಅಶ್ಲೀಲ ಚಿತ್ರ ಪ್ರಕರಣ: ಹೊಸ ಎಫ್‌ಐಆರ್‌ನಲ್ಲಿ ನಟಿ ಗೆಹನಾ ವಸಿಷ್ಠ ಹೆಸರು

ಪಿಟಿಐ
Published 28 ಜುಲೈ 2021, 8:02 IST
Last Updated 28 ಜುಲೈ 2021, 8:02 IST
ಅಶ್ಲೀಲ ಚಿತ್ರಗಳ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮಂಗಳವಾರ ಮುಂಬೈನ ಬೈಕುಲ್ಲಾದಲ್ಲಿ ಪ್ರಾಪರ್ಟಿ ಸೆಲ್ ಯುನಿಟ್ ಕಚೇರಿಯಿಂದ ಕಿಲ್ಲಾ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವುದು.
ಅಶ್ಲೀಲ ಚಿತ್ರಗಳ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮಂಗಳವಾರ ಮುಂಬೈನ ಬೈಕುಲ್ಲಾದಲ್ಲಿ ಪ್ರಾಪರ್ಟಿ ಸೆಲ್ ಯುನಿಟ್ ಕಚೇರಿಯಿಂದ ಕಿಲ್ಲಾ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವುದು.   

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಅಪರಾಧ ವಿಭಾಗದ ಪೊಲೀಸರು ಹೊಸದಾಗಿ ಎಫ್‌ಐಆರ್ ದಾಖಲಿಸಿದ್ದು, ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ಮಾಪಕರು ಮತ್ತು ನಟಿ ಗೆಹನಾ ವಸಿಷ್ಠ ಅವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಹಾಟ್‌ಶಾಟ್ಸ್‌ ಆ್ಯಪ್‌ಗಾಗಿ ಅಶ್ಲೀಲ ಚಿತ್ರಗಳನ್ನು ಶೂಟ್‌ ಮಾಡಲು ಒತ್ತಾಯಿಸುತ್ತಿದ್ದ ಆರೋಪದ ಮೇಲೆ ನಟಿ ಗೆಹನಾ ವಿರುದ್ಧ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊಕದ್ದಮೆ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 420(ವಂಚನೆ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಆ್ಯಪ್‌ಗಳಿಗಾಗಿ ಅಶ್ಲೀಲ ಚಿತ್ರಗಳನ್ನು ತಯಾರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 19ರಂದು ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್‌ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದರು. ಮಂಗಳವಾರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕಳೆದ ವರ್ಷ ಆಗಸ್ಟ್ ಮತ್ತು ಡಿಸೆಂಬರ್ ನಡುವೆ ರಾಜ್‌ಕುಂದ್ರಾ ಈ ಉದ್ಯಮದಿಂದ ₹1.17 ಕೋಟಿ ಗಳಿಸಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.