ಮುಂಬೈ: ಅಯೋಧ್ಯೆಗೆ ಜೂ.5ರಂದು ನೀಡಬೇಕಿದ್ದ ಭೇಟಿಯನ್ನು ಮುಂದೂಡಿರುವುದಾಗಿ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆಶುಕ್ರವಾರ ಹೇಳಿದ್ದಾರೆ.
ಈ ಬಗ್ಗೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಅವರು, 'ಅಯೋಧ್ಯೆ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದೇನೆ. ಮೇ 22ರಂದು ಪುಣೆಯಲ್ಲಿ ಹಮ್ಮಿಕೊಂಡಿರುವ ರ‍್ಯಾಲಿಯಲ್ಲಿ ಈ ಬಗ್ಗೆ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.ರಾಜ್ ಠಾಕ್ರೆ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಅಯೋಧ್ಯೆ ಭೇಟಿ ಮುಂದೂಡಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ಉತ್ತರ ಭಾರತೀಯರನ್ನು ಅಪಮಾನಿಸುವ ರಾಜ್ ಠಾಕ್ರೆಗೆ ಅಯೋಧ್ಯೆ ಪ್ರವೇಶವಿಲ್ಲ: ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.