ರಾಜ್ ಠಾಕ್ರೆ
ಪಿಟಿಐ ಚಿತ್ರ
ಮುಂಬೈ: ತಮ್ಮ ಅನುಮತಿಯಿಲ್ಲದೆ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಹೇಳಿದ್ದಾರೆ.
ಮರಾಠಿಯಲ್ಲಿ ಮಾತನಾಡದ ಕಾರಣ ಆಹಾರ ಮಳಿಗೆ ಮಾಲೀಕರ ಮೇಲೆ ನಡೆದ ದಾಳಿಯಿಂದ ದೊಡ್ಡ ಮಟ್ಟದಲ್ಲಿ ಭಾಷಾ ವಿವಾದ ಉಂಟಾದ ಕಾರಣ ರಾಜ್ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.
ಭಾಷಾ ವಿವಾದ ಕುರಿತಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ, ಪೋಸ್ಟ್ ಹಾಗೂ ಪ್ರತಿಕ್ರಿಯೆಗಳನ್ನು ಪೋಸ್ಟ್ ಮಾಡಬಾರದು ಎಂದು ಠಾಕ್ರೆ ಹೇಳಿದ್ದಾರೆ.
ಪಕ್ಷದ ಮಾಧ್ಯಮ ವಕ್ತಾರರು ತಮ್ಮ ಅನುಮತಿ ಇಲ್ಲದೇ ಮಾಧ್ಯಮಗಳ ಜೊತೆ ಸಂವಹನ ನಡೆಸಬಾರದು ಹಾಗೂ ಪತ್ರಿಕೆಗಳು, ಸುದ್ದಿ ವಾಹಿನಿಗಳು ಅಥವಾ ಯಾವುದೇ ಡಿಜಿಟಲ್ ಮಾಧ್ಯಮದೊಂದಿಗೆ ಸಂವಹನ ನಡೆಸಬಾರದು. ಸಾಮಾಜಿಕ ಮಾಧ್ಯಮಗಳಲ್ಲೂ ಯಾವುದೇ ಮಾಹಿತಿ ಪ್ರಕಟಿಸಬಾರದು ಹಾಗೂ ಪ್ರತಿಕ್ರಿಯೆ ನೀಡಬಾರದು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.