ADVERTISEMENT

Rajasthan Election Result Highlights: ‘ಕೈ’ ಕೋಟೆಯಲ್ಲಿ ‘ಕಮಲ’ ಕಿಲಕಿಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2023, 9:31 IST
Last Updated 3 ಡಿಸೆಂಬರ್ 2023, 9:31 IST
<div class="paragraphs"><p>ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ</p></div>

ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

   

–ಪಿಟಿಐ ಚಿತ್ರ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆಗೆ ಸಿದ್ಧವಾಗಿದೆ. ಈ ಮೂಲಕ ಮತಗಟ್ಟೆ ಸಮೀಕ್ಷೆಗಳ ‘ಭವಿಷ್ಯ’ ನಿಜವಾಗಿದೆ.

ADVERTISEMENT

ರಾಜಸ್ಥಾನದಲ್ಲಿ ವಿಧಾನಸಭೆಯ 200 ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ನವೆಂಬರ್ 25ರಂದು ಚುನಾವಣೆ ನಡೆದಿದ್ದು, ಶೇ 68.52 ರಷ್ಟು ಮತದಾನ ಆಗಿತ್ತು.

ಈ ಬಾರಿ ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದರು. 2018ರಲ್ಲಿ ನಡೆದ ಚುನಾವಣೆಯಲ್ಲಿ ಶೇ 74.72ರಷ್ಟು ಮತದಾನವಾಗಿತ್ತು.

ಇಂದು ಮತ ಎಣಿಕೆ ನಡೆದಿದ್ದು, 199 ಸ್ಥಾನಗಳ ಪೈಕಿ 115ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ನೇತೃತ್ವದ ಕಾಂಗ್ರೆಸ್ 69ರಲ್ಲಿ ಹಾಗೂ ಇತರೆ ಪಕ್ಷೇತರ ಅಭ್ಯರ್ಥಿಗಳು 12ರಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯ ಮ್ಯಾಜಿಕ್ ನಂಬರ್ 100.

ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯವನ್ನು 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ‘ಸಂಪ್ರದಾಯ’ ಈ ಸಲವೂ ಮುಂದುವರಿದೆ.

ಕಣದಲ್ಲಿದ್ದ ಪ್ರಮುಖ ನಾಯಕರು: ರಾಜಸ್ಥಾನ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್‌ ಗೆಹಲೋತ್‌, ಸಚಿನ್ ಪೈಲಟ್, ಹಾಗೂ ಬಿಜೆಪಿಯಿಂದ ವಸುಂಧರಾ ರಾಜೇ ಸಿಂಧಿಯಾ ಅವರು ಕಣಕ್ಕಿಳಿದಿದ್ದರು.

ಸಾರಾಂಶ
  • ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

  • 199 ಸ್ಥಾನಗಳ ಪೈಕಿ 115ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ನೇತೃತ್ವದ ಕಾಂಗ್ರೆಸ್ 69ರಲ್ಲಿ ಹಾಗೂ ಇತರೆ ಪಕ್ಷೇತರ ಅಭ್ಯರ್ಥಿಗಳು 13ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

  • ರಾಜಸ್ಥಾನ ವಿಧಾನಸಭೆಯ ಮ್ಯಾಜಿಕ್ ನಂಬರ್ 100.

  • ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್‌ 29 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

  • 50 ಮಹಿಳಾ ಅಭ್ಯರ್ಥಿಗಳ ಪೈಕಿ 20 ಮಂದಿ ರಾಜಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.