ADVERTISEMENT

ರಾಜಸ್ಥಾನ | ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಸಾವು

ಪಿಟಿಐ
Published 10 ಜೂನ್ 2025, 10:06 IST
Last Updated 10 ಜೂನ್ 2025, 10:06 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಜೈಪುರ: ರಾಜಸ್ಥಾನದ ಟೊಂಕ್‌ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

25ರಿಂದ 30 ವರ್ಷ ವಯಸ್ಸಿನ 11 ಮಂದಿ ಯುವಕರು ಸ್ನಾನ ಮಾಡಲು ನದಿಗೆ ಇಳಿದಿದ್ದರು. ಇದೇ ವೇಳೆ 8 ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಟೊಂಕ್‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಂಗ್ವಾನ್ ತಿಳಿಸಿದ್ದಾರೆ.

ADVERTISEMENT

ಇತರ ಮೂವರನ್ನು ರಕ್ಷಿಸಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಜೈಪುರದಿಂದ ಪ್ರವಾಸಕ್ಕೆ ಬಂದಿದ್ದರು ಎಂದು ಸಂಗ್ವಾನ್ ಮಾಹಿತಿ ನೀಡಿದ್ದಾರೆ.

‘ಬನಾಸ್ ನದಿಯಲ್ಲಿ ಮುಳುಗಿ 8 ಮಂದಿ ಪ್ರವಾಸಿಗರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದೇನೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.