ADVERTISEMENT

ಪ್ರಿಯಾಂಕಾ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2023, 15:55 IST
Last Updated 22 ಅಕ್ಟೋಬರ್ 2023, 15:55 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ಜೈಪುರ (ಪಿಟಿಐ): ‘ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದುರುದ್ದೇಶದಿಂದ ಸಾರ್ವಜನಿಕ ಸಭೆಯಲ್ಲಿ ಸುಳ್ಳುಗಳನ್ನು ಹೇಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ರಾಜಸ್ಥಾನ ಬಿಜೆಪಿ ಘಟಕವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

‘ಅಕ್ಟೋಬರ್ 20ರಂದು ದೌಸಾದಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಅವರು, ಬಿಜೆಪಿಯು ಜನರ ಕಲ್ಯಾಣದ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಆರೋಪಿಸಿದ್ದರು. ಪ್ರಧಾನಿ ವಿರುದ್ಧ ದುರುದ್ದೇಶಪೂರಿತ ಸುಳ್ಳು ಹೇಳಿಕೆಗಳನ್ನು ನೀಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್‌ ಆಗ್ರಹಿಸಿದ್ದಾರೆ.

ಸಿಕಾರೈ ಗ್ರಾಮದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.