ಜೈಪುರ: ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದುರುದ್ದೇಶಪೂರಿತ ಸುಳ್ಳುಗಳನ್ನು ಹರಡಲಾಗಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
‘ಶುಕ್ರವಾರ ದೌಸಾದ ಸಿಕರೈ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಿದ್ದು, ಈ ವೇಳೆ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಈ ಕುರಿತಂತೆ ಬಿಜೆಪಿ ನಾಯಕ ರಾಜೇಂದ್ರ ರಾಥೋಡ್ ನೇತೃತ್ವದಲ್ಲಿ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಲಾಗಿದೆ’ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ದುರುದ್ದೇಶಪೂರಿತ ಸುಳ್ಳು ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ದೂರಿನ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ‘ಚುನಾವಣೆ ಬಂದಾಕ್ಷಣ ಜಾತಿ–ಧರ್ಮಗಳ ಬಗ್ಗೆ ಬಿಜೆಪಿ ಮಾತನಾಡಲು ಶುರು ಮಾಡುತ್ತದೆ. ಅಭಿವೃದ್ಧಿಯ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.