ವರ್ಗಾವಣೆ
ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ನೇತೃತ್ವದ ರಾಜ್ಯ ಸರ್ಕಾರವು ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 72 ಐಎಎಸ್ ಅಧಿಕಾರಿಗಳು ಹಾಗೂ 121 ರಾಜ್ಯ ಆಡಳಿತ ಸೇವೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆಡಳಿತ ಯಂತ್ರಕ್ಕೆ ಕೈಹಾಕಿರುವ ಸರ್ಕಾರ, ಹಿರಿಯ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಶುಕ್ರವಾರ ರಾತ್ರಿ ಹೊರಡಿಸಿದೆ.
ಚುರು ಜಿಲ್ಲಾಧಿಕಾರಿ ಸಿದ್ಧಾರ್ಥ್ ಸಿಹಾಗ್ ಅವರು ಮುಖ್ಯಮಂತ್ರಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಕೇಕ್ರಿ ಜಿಲ್ಲಾಧಿಕಾರಿ ವಿ.ಎಂ.ಶರ್ಮಾ ಅವರು ಬಿಸಿಯೂಟ ಯೋಜನೆಯ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.