ADVERTISEMENT

ರಾಜಸ್ಥಾನ BJP ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ: 'ನೂತನ ಸಿಎಂ' ಕುತೂಹಲಕ್ಕೆ ತೆರೆ!

ಪಿಟಿಐ
Published 12 ಡಿಸೆಂಬರ್ 2023, 3:33 IST
Last Updated 12 ಡಿಸೆಂಬರ್ 2023, 3:33 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಜೈಪುರ: ರಾಜಸ್ಥಾನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು (ಮಂಗಳವಾರ) ಸಂಜೆ 4ಕ್ಕೆ ನಿಗದಿಯಾಗಿದ್ದು, ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.

ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್‌ ಸಿಂಗ್‌, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್‌ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ನೇತೃತ್ವದಲ್ಲಿ ಪಕ್ಷದ ರಾಜ್ಯ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಭಜನ್‌ಲಾಲ್‌ ಶರ್ಮಾ ಹೇಳಿದ್ದಾರೆ.

ADVERTISEMENT

ಹೊಸದಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರಿಗೂ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಸಭೆ ಬಳಿಕ ಘೋಷಿಸಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್‌ ರಾಮ್‌ ಮೆಘವಾಲ್‌, ಗಜೇಂದ್ರ ಸಿಂಗ್‌ ಶೇಖಾವತ್‌, ಅಶ್ವಿನಿ ವೈಷ್ಣವ್‌ ಸಿಎಂ ಗಾದಿ ರೇಸ್‌ನಲ್ಲಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನದ ವಿಧಾನಸಭೆಯ 199 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 115 ಕಡೆ ಗೆಲುವು ಸಾಧಿಸಿ, ಸರ್ಕಾರ ರಚಿಸಲು ಬಹುಮತ ಪಡೆದುಕೊಂಡಿದೆ.

ಶ್ರೀಗಂಗಾನಗರದ ಕರಣಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನಾರ್ ನಿಧನದಿಂದಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.