ADVERTISEMENT

ಅತ್ಯಾಚಾರ ಆರೋಪ: ರಾಜಸ್ಥಾನದ ಬಿಜೆಪಿ ಶಾಸಕ ಪ್ರತಾಪ್‌ ಲಾಲ್ ವಿರುದ್ಧ ಎಫ್‌ಐಆರ್‌

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪ

ಪಿಟಿಐ
Published 5 ಫೆಬ್ರುವರಿ 2021, 8:59 IST
Last Updated 5 ಫೆಬ್ರುವರಿ 2021, 8:59 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಉದಯಪುರ: ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್‌ ಲಾಲ್‌ ಭೀಲ್ ವಿರುದ್ಧ ಸುಖರ್ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.

ಮಧ್ಯಪ್ರದೇಶದ ಮೂಲದ 35 ವರ್ಷದ ಮಹಿಳೆಯೊಬ್ಬರು ‘ಶಾಸಕರು ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ‘ ಎಂದು ದೂರು ನೀಡಿದ್ದರು.

‘ಈ ಹಿನ್ನೆಲೆಯಲ್ಲಿ ಗುರುವಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ‘ ಎಂದು ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್ ಹೇಳಿದ್ದಾರೆ.

‘ದೂರು ನೀಡಿರುವ ಸಂತ್ರಸ್ತೆ ಹಾಗೂ ಶಾಸಕರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಇವರಿಬ್ಬರೂ ಸಂಪರ್ಕದಲ್ಲಿದ್ದಾರೆ‘ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಈ ಕುರಿತು ಶಾಸಕರು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.