ಬಸ್‌ಗೆ ಹೊತ್ತಿಕೊಂಡ ಬೆಂಕಿ
ಪಿಟಿಐ ಚಿತ್ರ
ಜೈಸಲ್ಮೇರ್(ರಾಜಸ್ಥಾನ): ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೊರಟಿದ್ದ ಖಾಸಗಿ ಬಸ್‌ವೊಂದಕ್ಕೆ ಮಂಗಳವಾರ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಪ್ರಯಾಣಿಕರು ಸಜೀವ ದಹನವಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ.
ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಸ್ಥಳೀಯರು ಹಾಗೂ ಆ ರಸ್ತೆಯಲ್ಲಿ ಸಾಗುತ್ತಿದ್ದ ಜನರು ಧಾವಿಸಿ, ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಸೇನೆ ಸಿಬ್ಬಂದಿ ಕೂಡ ಕೈಜೋಡಿಸಿದ್ದಾರೆ.
57 ಪ್ರಯಾಣಿಕರಿದ್ದ ಬಸ್, ಮಧ್ಯಾಹ್ನ 3ರ ಸುಮಾರಿಗೆ ಜೈಸಲ್ಮೇರ್‌ನಿಂದ ಹೊರಟಿದೆ. ದಾರಿ ಮಧ್ಯೆ ಬಸ್‌ನ ಹಿಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಬಸ್‌ಅನ್ನು ರಸ್ತೆ ಪಕ್ಕ ನಿಲ್ಲಿಸಲು ಚಾಲಕ ಮುಂದಾಗುತ್ತಿದ್ದ ವೇಳೆಯೇ, ಬೆಂಕಿಯು ಇಡೀ ಬಸ್‌ಗೆ ವ್ಯಾಪಿಸಿಕೊಂಡಿದೆ.
ಜೈಸಲ್ಮೇರ್‌ನಿಂದ ಹೊರಟ 10 ನಿಮಿಷಗಳ ಬಳಿಕ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದರೆ, ಅಸ್ವಸ್ಥಗೊಂಡಿದ್ದ ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ, ಗಾಯ ಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.