ADVERTISEMENT

ಉಚಿತ ಕೋವಿಡ್ ಲಸಿಕೆ: ರಾಜಸ್ಥಾನ, ಪಂಜಾಬ್‌ ನಿರ್ಧಾರ

ಪಿಟಿಐ
Published 25 ಏಪ್ರಿಲ್ 2021, 14:46 IST
Last Updated 25 ಏಪ್ರಿಲ್ 2021, 14:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮೇ 1ರಿಂದ ಆರಂಭವಾಗಲಿರುವ ಅಭಿಯಾನದಲ್ಲಿ 18ರಿಂದ 45 ವರ್ಷದವರಿಗೆ ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು ತೀರ್ಮಾನಿಸಿವೆ. ಈಗಾಗಲೇ ವಿವಿಧ ರಾಜ್ಯಗಳು ಉಚಿತ ಲಸಿಕೆ ನೀಡುವ ನಿರ್ಧಾರವನ್ನು ಪ್ರಕಟಿಸಿವೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಿದರು. ‘ಸರ್ಕಾರ ಈ ಉದ್ದೇಶಕ್ಕಾಗಿ ಸುಮಾರು ₹ 3000 ಕೋಟಿ ವ್ಯಯಿಸಲಿದೆ. ವಿವಿಧ ರಾಜ್ಯಗಳ ಬೇಡಿಕೆಯಂತೆ ಕೇಂದ್ರ ಸರ್ಕಾರವೇ ಈ ವೆಚ್ಚವನ್ನು ಭರಿಸಿದರೆ ಸೂಕ್ತವಾಗಿರುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೂ ಉಚಿತ ಲಸಿಕೆ ನೀಡುವ ತೀರ್ಮಾನ ಪ್ರಕಟಿಸಿದ್ದಾರೆ. 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲು 30 ಲಕ್ಷ ಡೋಸ್‌ ಲಸಿಕೆ ಖರೀದಿಗೆ ಕ್ರಮವಹಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಳಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ‌ಲಾಕ್‌ಡೌನ್‌ ವಿಸ್ತರಣೆ: ಇತ್ತ, ಕೋವಿಡ್‌ ಸೋಂಕು ಹರಡುವಿಕೆ ತಡೆಯುವ ಕ್ರಮವಾಗಿ ವಿಧಿಸಲಾಗಿದ್ದ ಲಾಕ್‌ಡೌನ್ ಅನ್ನು ಇನ್ನೂ ಒಂದು ವಾರ ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿದೆ.

ಈ ಮೊದಲು ವಿಧಿಸಿದ್ದ ಲಾಕ್‌ ಡೌನ್‌ ಈಗ ಮೇ 3ರಂದು ಬೆಳಿಗ್ಗೆ 5ಗಂಟೆಯವರೆಗೂ ಚಾಲ್ತಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ. ಮೊದಲಿನ ನಿರ್ಧಾರದಂತೆ ಲಾಕ್‌ಡೌನ್ ಏಪ್ರಿಲ್‌ 26ರಂದು ಅಂತ್ಯವಾಗಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.