ಜೈಪುರ: ತಮಗೆ ಕೋವಿಡ್ ಪಾಸಿಟಿವ್ ಆಗಿರುವುದಾಗಿ ಬುಧವಾರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
69 ವರ್ಷದ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ತಮ್ಮ ಪತ್ನಿ ಸುನೀತಾ ಅವರ ಕೋವಿಡ್ ಟೆಸ್ಟ್ ಪಾಸಿಟಿವ್ ಬಂದ ಬಳಿಕ ಪ್ರತ್ಯೇಕ ವಾಸದಲ್ಲಿದ್ದರು. ಇದೀಗ, ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.
‘ನನ್ನ ಕೋವಿಡ್ -19 ಪರೀಕ್ಷಾ ವರದಿಯು ಇಂದು ಪಾಸಿಟಿವ್ ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲ. ನಾನು ಚೆನ್ನಾಗಿದ್ದೇನೆ. ಕೋವಿಡ್ -19 ಪ್ರೋಟೊಕಾಲ್‌ಗಳನ್ನು ಅನುಸರಿಸಿ ಪ್ರತ್ಯೇಕ ವಾಸದಲ್ಲಿ ಕೆಲಸ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಹಿಂದಿಯಲ್ಲಿ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.