
ಜೈಪುರ: ಅರಾವಳಿ ಪರ್ವತ ಶ್ರೇಣಿಯಲ್ಲಿ ಪ್ರಸ್ತಾಪಿತ ಗಣಿಗಾರಿಕೆಯ ವ್ಯಾಪ್ತಿಯ ಕುರಿತು ಕೇಂದ್ರ ಮತ್ತು ರಾಜಸ್ಥಾನದ ಬಿಜೆಪಿ ನೇತೃತ್ವದ ಸರ್ಕಾರಗಳು ಜನರ ಹಾದಿ ತಪ್ಪಿಸುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.
100 ಮೀಟರ್‌ಗಿಂತ ಹೆಚ್ಚು ಎತ್ತರವಿರುವ ಬೆಟ್ಟಗಳನ್ನು ಮಾತ್ರವೇ ಅರಾವಳಿ ಪರ್ವತ ಶ್ರೇಣಿಗೆ ಪರಿಗಣಿಸಲಾಗುವುದು ಎಂಬ ಮಾನದಂಡದ ವಿರುದ್ಧ 19 ಜಿಲ್ಲೆಗಳಲ್ಲಿ ಆಂದೋಲನವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದೆ.
ರಾಜಸ್ಥಾನದ ಕಾಂಗ್ರೆಸ್ ಘಟಕದ ಅಧ್ಯಕ್ಷ ಗೋವಿಂದ ಸಿಂಗ್ ದೋತಾಸ್ರಾ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜುಲ್ಲಿ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
‘ದೊಡ್ಡ ಪ್ರಮಾಣದ ಗಣಿಗಾರಿಕೆಗೆ ಅನುವು ಮಾಡಿಕೊಡಲು ಬಿಜೆಪಿ ಸರ್ಕಾರ ಮುಂದಾಗಿದೆ. ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವವರೆಗೂ ‘ಅರಾವಳಿ ಬಚಾವೋ’ ಆಂದೋಲನವನ್ನು ಮುಂದುವರಿಸುತ್ತೇವೆ’ ಎಂದು ದೋತಾಸ್ರಾ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.