ADVERTISEMENT

ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್: ಗೆಹಲೋತ್

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 15:57 IST
Last Updated 14 ಅಕ್ಟೋಬರ್ 2023, 15:57 IST
ಅಶೋಕ್ ಗೆಹಲೋತ್‌ (ಪಿಟಿಐ ಸಂಗ್ರಹ ಚಿತ್ರ)
ಅಶೋಕ್ ಗೆಹಲೋತ್‌ (ಪಿಟಿಐ ಸಂಗ್ರಹ ಚಿತ್ರ)   

ಜೈಪುರ (ಪಿಟಿಐ): ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾಲ್ವರು ಹಾಲಿ ಶಾಸಕರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜಸ್ಥಾನ ಕಾಂಗ್ರೆಸ್‌ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಿದೆ. 

ರಾಜಸ್ಥಾನ ಕಾಂಗ್ರೆಸ್‌ ಅಧ್ಯಕ್ಷ ಗೋವಿಂದ್‌ ಸಿಂಗ್‌ ದೊತಸ್ರ ನೇತೃತ್ವದ ಸಮಿತಿಯು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಸ್ತಾಪಿಸಲಿದೆ.  ‌

ಶುಕ್ರವಾರ ಸಂಜೆ ಪಕ್ಷದ ವಾರ್ ರೂಂನಲ್ಲಿ ನಡೆದ ಸಭೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಮತ್ತು ಸಮಿತಿಯ ಇತರ ಸದಸ್ಯರು ಭಾಗವಹಿಸಿದ್ದರು. ಸಭೆ ನಡೆಯುವ ವೇಳೆ ವಿವಿಧ ಕ್ಷೇತ್ರಗಳ ಪಕ್ಷದ ಕಾರ್ಯಕರ್ತರು ಕೆಲ ಹಾಲಿ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿ, ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.

ADVERTISEMENT

‘ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅವರ ಮಾತನ್ನು ಕೇಳುತ್ತೇವೆ. ಸೂಕ್ತವಾದದ್ದನ್ನು ಸ್ಕ್ರೀನಿಂಗ್ ಸಮಿತಿಗೆ ತಿಳಿಸಲಾಗುವುದು’ ಎಂದು ದೊತಸ್ರ ಹೇಳಿದರು. 

ಅಶೋಕ್ ಗೆಹಲೋತ್ ಮಾತನಾಡಿ, ‘ಚುನಾವಣೆ ಸಮಯದಲ್ಲಿ ಸಂಸದ ಅಥವಾ ಶಾಸಕರ ವಿರುದ್ಧ ವ್ಯತಿರಿಕ್ತ ಟೀಕೆ ಮಾಡುವುದು ಸಾಮಾನ್ಯ ಸಂಗತಿಯಲ್ಲ. ಇಂತಹ ಹೇಳಿಕೆಗಳು ನಿಜವಾಗಿರಬಹುದು ಅಥವಾ ಸುಳ್ಳಾಗಿರಬಹುದು. ಇದರಲ್ಲಿ ಪಿತೂರಿಯೂ ಇರಬಹುದು.  ಅಂತಿಮವಾಗಿ ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಮತ್ತು ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು’ ಎಂದು ಅವರು ಹೇಳಿದರು.

ಪಕ್ಷದಲ್ಲಿ ಎಲ್ಲವೂ ಸುಗಮವಾಗಿ ನಡೆಯುತ್ತಿದೆ. ಪೂರ್ವ ರಾಜಸ್ಥಾನದ ಬರಾನ್ ನಿಂದ ಚುನಾವಣಾ ಪ್ರಚಾರ ಪ್ರಾರಂಭಿಸಲಾಗುವುದು. ಅ. 16 ರಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಪೂರ್ವ ರಾಜಸ್ಥಾನದ 13 ಜಿಲ್ಲೆಗಳಲ್ಲಿ ಸಣ್ಣ ಮತ್ತು ದೊಡ್ಡ ರ್‍ಯಾಲಿಗಳನ್ನು ನಡೆಸಲಾಗುವುದು ಎಂದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.