ADVERTISEMENT

ರಾಜಸ್ಥಾನ | ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: 5 ಸಾವು, 49 ಮಂದಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2022, 7:07 IST
Last Updated 9 ಡಿಸೆಂಬರ್ 2022, 7:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೋಧಪುರ:ರಾಜಸ್ಥಾನದ ಜೋಧಪುರದಲ್ಲಿ ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಐದು ಮಂದಿ ಮೃತಪಟ್ಟಿದ್ದು, 49 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂಂಗಾರ ಗ್ರಾಮದಲ್ಲಿ ಮನೆಯ ಸ್ಟೋರ್ ರೂಂನಲ್ಲಿ ಇರಿಸಿಲಾಗಿದ್ದ ಸಿಲಿಂಡರ್‌‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಜೋಧಪುರ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕಯಾಲ್ ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಎಂಜಿಎಚ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.