ಮದನ್ ದಿಲಾವರ್
CreditL X/@madandilawar
ಕೋಟಾ (ರಾಜಸ್ಥಾನ): ಕೋಟಾದ ಕೋಚಿಂಗ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಶನಿವಾರ ಹೇಳಿದ್ದಾರೆ.
ವಿದ್ಯಾರ್ಥಿಗಳ ಆತ್ಮಹತ್ಯೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೋಷಕರು ಜಾಗರೂಕರಾಗಿರಬೇಕು ಮತ್ತು ತಮ್ಮ ಮಕ್ಕಳ ಮೇಲೆ ಒತ್ತಡ ಹೇರಬಾರದು ಎಂದು ಸಲಹೆ ನೀಡಿದ್ದಾರೆ.
'ನನ್ನ ಮಾತುಗಳು ಕೆಲವರಿಗೆ ಕಿರಿಕಿರಿ ಉಂಟು ಮಾಡಬಹುದು. ಆದರೆ ಪೋಷಕರು ತಮ್ಮ ಮಕ್ಕಳ ಚಲನವಲನ ಮತ್ತು ದಿನಚರಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನದೇ ಆದ ಆಸಕ್ತಿಯನ್ನು ಹೊಂದಿರುತ್ತಾನೆ. ಅವರ ಆಸಕ್ತಿಗೆ ವಿರುದ್ಧವಾದ ಕ್ಷೇತ್ರದಲ್ಲಿ ಗುರಿಯನ್ನು ಸಾಧಿಸಲು ಒತ್ತಾಯಿಸಿದಾಗ ಅವರು ವಿಫಲರಾಗಿ ಖಿನ್ನತೆಗೆ ಒಳಗಾಗುತ್ತಾರೆ' ಎಂದು ಹೇಳಿದ್ದಾರೆ.
ಅಲ್ಲದೇ ಕೆಲವು ಆತ್ಮಹತ್ಯೆಗೆ ಪ್ರಕರಣಗಳಿಗೆ ಪ್ರೇಮ ಪ್ರಕರಣಗಳು ಕಾರಣ ಎಂದೂ ಸಚಿವರು ಹೇಳಿದ್ದಾರೆ.
ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳ ಪ್ರಮುಖ ಕೇಂದ್ರವಾಗಿರುವ ಕೋಟಾದಲ್ಲಿ ಈ ವರ್ಷ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2024ರಲ್ಲಿ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.