ಅಶೋಕ್ ಗೆಹಲೋತ್
ನವದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್ ಪಕ್ಷ ಜನರಿಗೆ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.
ಇಲ್ಲಿನ ಮೋತಿ ದುಂಗಾರಿ ಗಣೇಶ ದೇವಸ್ಥಾನದಲ್ಲಿ ಗ್ಯಾರಂಟಿ ಯಾತ್ರೆಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹಾಗೂ ರಾಜ್ಯ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧವ ಚಾಲನೆ ನೀಡಿದರು.
ಈ ಯಾತ್ರೆಯ ವೇಳೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಯಾತ್ರೆಯಲ್ಲಿ ಭಾಗವಹಿಸಿರುವ ಕಾಂಗ್ರೆಸ್ ಮುಖಂಡರು ಜೈಪುರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪ್ರಚಾರ ನಡೆಸಿದರು.
1) ಕುಟುಂಬದ ಯಜಮಾನಿಗೆ ವಾರ್ಷಿಕ ₹ 10,000 ಗೌರವಧನ
2) 1.05 ಕೋಟಿ ಕುಟುಂಬಗಳಿಗೆ ₹ 500ಕ್ಕೆ ಅಡುಗೆ ಅನಿಲ ಸಿಲಿಂಡರ್ ನೀಡಿಕೆ
3) ಜಾನುವಾರು ಸಾಕಣೆದಾರರಿಂದ ಕೆ.ಜಿ.ಗೆ ₹ 2ಯಂತೆ ಸಗಣಿ ಖರೀದಿ
4) ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ
5) ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್
6) ನೈಸರ್ಗಿಕ ವಿಪತ್ತುಗಳಿಂದ ಉಂಟಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹ 15 ಲಕ್ಷಗಳವರೆಗೆ ವಿಮಾ ರಕ್ಷಣೆ
7) ಇಂಗ್ಲಿಷ್ ಮಾಧ್ಯಮದಲ್ಲಿ ಶಾಲಾ ಶಿಕ್ಷಣ
ರಾಜ್ಯದ 200 ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 25ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.