ಸಾಂದರ್ಭಿಕ ಚಿತ್ರ
ಐಸ್ಟೋಕ್ ಚಿತ್ರ
ಜೈಪುರ: ರಾಜಸ್ಥಾನದ ಜಲೋರ್ ಜಿಲ್ಲೆಯ ಶಾಲೆಯೊಂದರಲ್ಲಿ ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಲಾ ಪೊಲೀಸ್ ಠಾಣೆ ವ್ಯಾಪ್ತಿಯ ಪೋಷಣ ಎಂಬ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಸರ್ಕಾರಿ ಶಾಲೆಯ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದಿದ್ದು, ನಾಲ್ವರು ಕಾರ್ಮಿಕರು ಗೋಡೆಯ ಅವಶೇಷಗಳ ಅಡಿ ಸಿಲುಕಿದ್ದರು. ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಕಾರ್ಮಿಕರಾದ ಮೋಹನ್ ಲಾಲ್, ಭೈರ ರಾಮ್ ಮತ್ತು ಬಿರಾಮ್ ರಾಮ್ ಮೃತಪಟ್ಟಿದ್ದು, ಜಗದೀಶ್ ಎಂಬುವರು ಅಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.