ADVERTISEMENT

ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮದ 10, 12ನೇ ತರಗತಿ ಪರೀಕ್ಷೆಗಳು ರದ್ದು

ಪಿಟಿಐ
Published 3 ಜೂನ್ 2021, 1:27 IST
Last Updated 3 ಜೂನ್ 2021, 1:27 IST
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)   

ಜೈಪುರ: ಕೋವಿಡ್‌ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಹೈಯರ್‌ ಸೆಕೆಂಡರಿ(10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರವು ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.

ಗುಜರಾತ್‌ ಮತ್ತು ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಬುಧವಾರ ನಿರ್ಧರಿಸಿವೆ.

ADVERTISEMENT

‘ಕೋವಿಡ್‌–19 ಮೂರನೇ ಅಲೆಯಿಂದ ಮಕ್ಕಳು ಹೆಚ್ಚಾಗಿ ಸೋಂಕಿಗೆ ಒಳಗಾಗಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೊಸ್ತಾರ ತಿಳಿಸಿದ್ದಾರೆ.

ಈಗಾಗಲೇ ಹರಿಯಾಣ, ಉತ್ತರಾಖಂಡದಲ್ಲಿ ಬೋರ್ಡ್‌ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.