ADVERTISEMENT

ಸುರಕ್ಷಿತ ಶಾಲೆ-ಸುರಕ್ಷಿತ ರಾಜಸ್ಥಾನ ಅಭಿಯಾನ

ಪಿಟಿಐ
Published 26 ಆಗಸ್ಟ್ 2023, 19:47 IST
Last Updated 26 ಆಗಸ್ಟ್ 2023, 19:47 IST
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌   

ಜೈಪುರ: ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಅಸುರಕ್ಷಿತ ಸ್ಪರ್ಶದ ಬಗ್ಗೆ ಅರಿವು ಮೂಡಿಸಲು ರಾಜಸ್ಥಾನ ಸರ್ಕಾರವು ‘ಸುರಕ್ಷಿತ ಶಾಲೆ; ಸುರಕ್ಷಿತ ರಾಜಸ್ಥಾನ’ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದೆ.

65 ಸಾವಿರ ಶಾಲೆಗಳ 57 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಗುಡ್‌ ಟಚ್‌– ಬ್ಯಾಡ್‌ ಟಚ್‌ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 50 ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನದವರೆಗೆ ವಿಶೇಷ ತರಬೇತಿ ಆಯೋಜಿಸಲಾಗಿತ್ತು ಎಂದು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ನವೀನ್‌ ಜೈನ್‌ ತಿಳಿಸಿದರು.

ADVERTISEMENT

ಅಭಿಯಾನದ ಮೊದಲ ಹಂತದಲ್ಲಿ, ರಾಜ್ಯದ 65,284 ಸರ್ಕಾರಿ ಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ತರಬೇತಿ ಅವಧಿಗಳನ್ನು ನಡೆಸಲಾಯಿತು. ಇದರಲ್ಲಿ 57 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ಅರಿವು ಮೂಡಿಸಲಾಯಿತು. ಬರುವ ಅಕ್ಟೋಬರ್ ಮತ್ತು 2024ರ ಜನವರಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಈ ಅಭಿಯಾನದಡಿ ಮತ್ತೆ ತರಬೇತಿ ಆಯೋಜಿಸಲಾಗುವುದು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.