ADVERTISEMENT

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಮೇಲುಗೈ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 7:46 IST
Last Updated 19 ನವೆಂಬರ್ 2019, 7:46 IST
   

ಜೈಪುರ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು ಮಧ್ಯಾಹ್ನ 1ಗಂಟೆಗೆಲಭಿಸಿದ ಫಲಿತಾಂಶದ ಮಾಹಿತಿ ಪ್ರಕಾರ ಕಾಂಗ್ರೆಸ್ 708 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಅದೇ ವೇಳೆ ಬಿಜೆಪಿ 555ವಾರ್ಡ್‌ಗಳನ್ನು ಗೆದ್ದುಕೊಂಡಿದೆ.

ಅಲ್ವಾರ್ ಮತ್ತು ಜೈಸಲ್ಮೇರ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದೆ. ಬರನ್, ಬರ್‌ಮರ್, ಚಿತ್ತೋಡ್‌ಗಢ್, ಜೈಸಲ್ಮೇರ್, ಜುಂಜುನು, ಕೋಟಾ, ಸಿಕಾರ್, ರಾಜಸಮಂದ್ ಮತ್ತು ಸಿರೋಹಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಜಲೋರ್ ಮತ್ತು ಉದಯ್‌ಪುರ್‌ನಲ್ಲಿ ಬಿಜೆಪಿ ಮುನ್ನಡೆಯಿದ್ದು ಭರತ್‌ಪುರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಮುನ್ನಡೆಯಿದೆ

ಫಲಿತಾಂಶ ನಮ್ಮ ನಿರೀಕ್ಷೆಯಂತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್
ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ನೀಡಿದ್ದಾರೆ. ನಮ್ಮ ಆಕಾಂಕ್ಷೆ ಮತ್ತು ನಿರೀಕ್ಷೆಯಂತೆ ಫಲಿತಾಂಶ ಇದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟಿಸಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.