
ಜೈಪುರ: ಜೋಧಪುರ-ಬಾಲೆಸರ್ ರಾಷ್ಟ್ರೀಯ ಹೆದ್ದಾರಿ 125ರಲ್ಲಿ ಇಂದು (ಭಾನುವಾರ) ಮುಂಜಾನೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೊಗೆ ಧಾನ್ಯದ ಚೀಲಗಳನ್ನು ತುಂಬಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಜೋಧಪುರ ಜಿಲ್ಲೆಯ ಖಾರಿ ಬೇರಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಗುಜರಾತ್‌ನ ಬನಸ್ಕಂತ ಮತ್ತು ಧನ್ಸುರದಿಂದ ಸುಮಾರು 20 ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೊಗೆ ಮತ್ತೊಂದು ಬದಿಯಿಂದ ವೇಗವಾಗಿ ಬಂದ ಟ್ರಂಕ್ ಡಿಕ್ಕಿ ಹೊಡೆದಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಮಹಿಳೆಯರು ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳನ್ನು ಜೋಧಪುರದ ಎಂಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.