ADVERTISEMENT

ರಾಜಸ್ಥಾನ: 2 ತಿಂಗಳವರೆಗೆ 3.57 ಲಕ್ಷ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ

ಪಿಟಿಐ
Published 12 ಜೂನ್ 2020, 5:58 IST
Last Updated 12 ಜೂನ್ 2020, 5:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ವ್ಯಾಪ್ತಿಗೆ ಒಳಪಡದ 3.57 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಮತ್ತು ನಿರ್ಗತಿಕರಿಗೆ ಮುಂದಿನ ಎರಡು ತಿಂಗಳವರೆಗೆ ಉಚಿತ ಆಹಾರ ಧಾನ್ಯ ನೀಡಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.

ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ. ಇದರಿಂದ ಜನರಿಗೆ ತಿಂಗಳಿಗೆ ತಲಾ ಐದು ಕೆ.ಜಿ ಗೋಧಿ ನೀಡಲು ಸಾಧ್ಯವಾಗುತ್ತದೆ.

ಕುಟುಂಬಗಳ ಸಮೀಕ್ಷೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಆಹಾರ ಧಾನ್ಯವನ್ನು ಒದಗಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.