ADVERTISEMENT

ರಾಜಸ್ಥಾನ ರಾಜಕಾರಣ | ಮಂಗಳವಾರ ಸುಪ್ರೀಂನಲ್ಲಿ ಅರ್ಜಿಯ ವಿಚಾರಣೆ

ಪಿಟಿಐ
Published 10 ಆಗಸ್ಟ್ 2020, 10:33 IST
Last Updated 10 ಆಗಸ್ಟ್ 2020, 10:33 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ:ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಜೊತೆಗೆ ಬಿ.ಎಸ್.ಪಿಯ ಆರು ಮಂದಿ ಶಾಸಕರು ಕಳೆದ ವರ್ಷ ವಿಲೀನಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಬಿ.ಎಸ್.ಪಿ ಶಾಸಕರು ಕಾಂಗ್ರೆಸ್ ಸದಸ್ಯರಾಗಿ ಕಾರ್ಯನಿರ್ವಹಿಸುವುದಕ್ಕೆ ತಡೆ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸುಪ್ರೀಂ ಕೋರ್ಟ್ ನ ಮೊರೆ ಹೋಗಿದ್ದರು.

ಆರು ಮಂದಿ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿ ಹಾಗೂ ಬಿಜೆಪಿ ಸಂಸದ ಮದನ್ ದಿಲಾವರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠ ಸೋಮವಾರ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.