ADVERTISEMENT

ಕಾಂಗ್ರೆಸ್‌ ಸರ್ಕಾರ ಪತನಗೊಳಿಸುವ ಬಿಜೆಪಿ ಸಂಚು ಫಲಿಸದು: ರಣದೀಪ್ ಸುರ್ಜೇವಾಲಾ

ಏಜೆನ್ಸೀಸ್
Published 13 ಜುಲೈ 2020, 7:19 IST
Last Updated 13 ಜುಲೈ 2020, 7:19 IST
ರಣದೀಪ್ ಸಿಂಗ್ ಸುರ್ಜೇವಾಲಾ (ಸಂಗ್ರಹ ಚಿತ್ರ)
ರಣದೀಪ್ ಸಿಂಗ್ ಸುರ್ಜೇವಾಲಾ (ಸಂಗ್ರಹ ಚಿತ್ರ)   

ಜೈಪುರ: ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರ ಪತನಗೊಳಿಸಬೇಕೆಂಬ ಬಿಜೆಪಿ ಸಂಚು ಫಲಿಸದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಅವರ ನಿಷ್ಠ ಶಾಸಕರ ಜತೆ ಪಕ್ಷವು ಮಾತುಕತೆ ನಡೆಸುತ್ತಿದೆ ಎಂದೂ ಅವರು ಹೇಳಿದ್ದಾರೆ.

ರಾಜ್ಯದ ಜನ ಕಾಂಗ್ರೆಸ್‌ಗೆ ಮತ ನೀಡಿದ್ದು, ಪಕ್ಷದಿಂದ ಸ್ಥಿರ ಸರ್ಕಾರ ಬಯಸುತ್ತಿದ್ದಾರೆ. ಹೀಗಾಗಿ ಎಲ್ಲ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಭಾಗಿಯಾಗಬೇಕು. ನಮ್ಮ ಸರ್ಕಾರವನ್ನು ಗಟ್ಟಿಗೊಳಿಸಬೇಕು ಎಂದು ಸುರ್ಜೇವಾಲಾ ಮನವಿ ಮಾಡಿದ್ದಾರೆ.

‘ಸಚಿನ್ ಪೈಲಟ್ ಸಿಎಂ ಆಗಲು ಅರ್ಹ’: ಸಚಿನ್ ಪೈಲಟ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಅರ್ಹರು ಎಂದು ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ. ಪೈಲಟ್ ಅವರು ಮುಖ್ಯಮಂತ್ರಿಯಾಗಲು ಅರ್ಹರು. ಆದರೆ ಅಶೋಕ್ ಗೆಹ್ಲೋಟ್ ಅಧಿಕಾರ ವಹಿಸಿಕೊಂಡಿದ್ದಾರೆ. ಅಲ್ಲಿಂದಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಆರಂಭವಾಗಿದೆ. ಇಂದು ಏನು ನಡೆಯುತ್ತಿದೆಯೋ ಇದು ಅಂದು ಆರಂಭಗೊಂಡ ಭಿನ್ನಮತದ ಪರಿಣಾಮ. ರಾಜ್ಯ ಸರ್ಕಾರವು ಬಹುಮತ ಕಳೆದುಕೊಂಡಿದೆ ಎಂದು ಪೂನಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.