ADVERTISEMENT

Rajasthan Election | ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ಸಚಿನ್‌ ಪೈಲಟ್‌

ಪಿಟಿಐ
Published 31 ಅಕ್ಟೋಬರ್ 2023, 10:19 IST
Last Updated 31 ಅಕ್ಟೋಬರ್ 2023, 10:19 IST
ಸಚಿನ್‌ ಪೈಲಟ್‌
ಸಚಿನ್‌ ಪೈಲಟ್‌   

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ಟೊಂಕ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ನವೆಂಬರ್‌ 25ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

2018ರ ವಿಧಾನಸಭಾ ಚುನಾವಣೆಯಲ್ಲೂ ಪೈಲಟ್‌ ಟೊಂಕ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿಯ ಯೂನುಸ್‌ ಖಾನ್‌ ಅವರನ್ನು 54 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ADVERTISEMENT

ನಾಮಪತ್ರ ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದ್ದು, ಸಚಿನ್ ಪೈಲಟ್ ವಿರುದ್ಧ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.