ಅಪಘಾತ
–ಪ್ರಾತಿನಿಧಿಕ ಚಿತ್ರ
ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಕಪ್ ವ್ಯಾನ್‌ನಲ್ಲಿ 20 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಅವರೆಲ್ಲರೂ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಉತ್ತರ ಪ್ರದೇಶದ ಇಟಾದಲ್ಲಿರುವ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಮನೋಹರ್‌ಪುರ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ದೌಸಾ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ತಿಳಿಸಿದ್ದಾರೆ.
‘ಹೆದ್ದಾರಿಯ ಸರ್ವಿಸ್ ಲೇನ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದಿದೆ. ಏಳು ಮಕ್ಕಳು ಸೇರಿದಂತೆ ನಾಲ್ವರು ಮಹಿಳೆಯರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.