ಅಪಘಾತ
–ಪ್ರಾತಿನಿಧಿಕ ಚಿತ್ರ
ಜೈಪುರ: ರಾಜಸ್ಥಾನದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್‌ವೊಂದಕ್ಕೆ ಭಾನುವಾರ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.
ಭಾರತ್ ಮಾಲಾ ಹೆದ್ದಾರಿಯ ಮಾತೋಡಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೊ ಟ್ರಾವೆಲರ್‌ನಲ್ಲಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು.
‘ಮೃತರು ಜೋಧಪುರ ನಿವಾಸಿಗಳಾಗಿದ್ದು, ಬಿಕಾನೇರ್‌ನಲ್ಲಿರುವ ಕೋಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜೋಧಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜೋಧಪುರ ಪೊಲೀಸ್ ಕಮಿಷನರ್ ಓಂ ಪ್ರಕಾಶ್ ತಿಳಿಸಿದ್ದಾರೆ.
ಘಟನೆಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.